15 September 2025
Coastal

ಚುನಾವಣಾ ದಿನದಂದು ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಿ : ಜಿಲ್ಲಾಧಿಕಾರಿ ಸೂಚನೆ…!!

ಏಪ್ರಿಲ್ -23-2024 swabhimana news

ಉಡುಪಿ, ಏಪ್ರಿಲ್ 23 : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನವು ಏಪ್ರಿಲ್ 26 ರಂದು ನಡೆಯಲಿದೆ.

18 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಮತದಾನ ಮಾಡುವುದು ಸಂವಿಧಾನ ಬದ್ಧ ಹಕ್ಕು ಆಗಿದ್ದು, ಈ ಸಂದರ್ಭದಲ್ಲಿ ಬಲಾಢ್ಯ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಏ. 26 ರಂದು ರಜೆ ಘೋಷಿಸಿರುತ್ತದೆ. ಆದ್ದರಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತರಬೇತಿ ನಡೆಸುತ್ತಿರುವ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳನ್ನು ಮತದಾನ ದಿನದಂದು ಬಂದ್ ಮಾಡಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

, swabhimananews

Related posts

ದಲಿತ ಸಂಘರ್ಷ ಸಮಿತಿ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ನೂತನ ಉಡುಪಿ ಜಿಲ್ಲಾ ಸಂಚಾಲಕರಾಗಿ.ಸಂಜೀವ ಕುಕ್ಕೆಹಳ್ಳಿ ಆಯ್ಕೆ.

Swabhimana News Desk

ಏ.23 ರಿಂದ 29 ರ ವರೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮ

Swabhimana News Desk

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ನೇಮಕ…!!

Swabhimana News Desk

Leave a Comment