16 September 2025
Karnataka

ಹೆಚ್‌.ಡಿ. ರೇವಣ್ಣ , ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ.ಪ್ರಕರಣ ದಾಖಲು!



ಏಪ್ರಿಲ್ 30-2024-Swabhimananews

ಹಾಸನ: ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತ್ತು ಅವರ ಅಪ್ಪ ಮಾಜಿ ಸಚಿವ ಹೆಚ್‌ಡಿ ರೇವಣ್ಣ ವಿರುದ್ಧ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ ವಿರುದ್ಧ ಪ್ರಕರಣ  ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಹೆಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿ ಹಿಂಸೆ ನೀಡಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ರೇವಣ್ಣ ತಮ್ಮ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ,. ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಮಗ ಮತ್ತು ಅಪ್ಲ ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಹೆಚ್‌ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
Swabhimananews.

Related posts

ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ.

Swabhimana News Desk

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ : ಆರೇಂಜ್ ಅಲರ್ಟ್ ಘೋಷಣೆ.

Swabhimana News Desk

ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ದ ಎಫ್ಐಆರ್.

Swabhimana News Desk

Leave a Comment