ಡಿಸೆಂಬರ್- 09-2024 swabhimaananews
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿಕೊಂಡು ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಸಂಭವಿಸಿದೆ
ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಜೋಕಾಲಿಗೆ ಬಲಿಯಾದ ಬಾಲಕಿ ಎಂದು ತಿಳಿಯಲಾಗಿದೆ.
ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಈ ಘಟನೆ ನಡೆದಿದೆ.
ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Swabhimaananews