27.2 C
New York
5 July 2025
Coastal

ಬ್ರಹ್ಮಾವರ ತಾಲೂಕಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ.

swabhimananews@gmail.com
July 13, 2023. ಉಡುಪಿ,

ಜುಲೈ 12 -2023 ರಂದು ಉಡುಪಿ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಬ್ರಹ್ಮಾವರ ತಾಲೂಕಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವು ದಿನಾಂಕ 12-07-2023 ರಂದು ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

swabhimananews@gmail.com
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 10 ಅಹವಾಲುಗಳನ್ನು ಸ್ವೀಕರಿಸಲಾಗಿದ್ದು, ಅವುಗಳಲ್ಲಿ 9 ನ್ನು ಸ್ಥಳದಲ್ಲೆ ಇತ್ಯರ್ಥಪಡಿಸಲಾಯಿತು. 1 ದೂರು ಅರ್ಜಿಗೆ ಸಂಬಂಧಿಸಿದಂತೆ ಪ್ರಪತ್ರ 1 ಮತ್ತು 2 ನ್ನು ನೀಡಲಾಯಿತು.

swabhimananews@gmail.com
ಸಾರ್ವಜನಿಕರ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೇ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಹಾಗೂ ಸೂಕ್ತ ಕಾರಣವಿಲ್ಲದೇ ತಿರಸ್ಕಾರ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

swabhimananews@gmail.com

ಮಳೆಗಾಲ ಪ್ರಾರಂಭವಾಗಿದ್ದು, ಅತಿಯಾದ ಮಳೆಬಂದು ಪ್ರವಾಹ ಉಂಟಾಗಿ ಜೀವಹಾನಿ ಹಾಗೂ ಬೆಳೆಹಾನಿ ಉಂಟಾಗುವ ಸಾಧ್ಯತೆಯಿರುವುದರಿಂದ ಕೂಡಲೇ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಹಾಗೂ ಪರಿಹಾರ ನೀಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಸಾಂಕ್ರಮಿಕ ಕಾಯಿಲೆಗಳು ಹರಡುವ ಸಾಧ್ಯತೆಯಿರುವುದರಿಂದ ಸೂಕ್ತ ಮುನ್ನಚ್ಚೆರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

swabhimananews@gmail.com

ಸರ್ವೆ ಇಲಾಖೆಯಿಂದ ಸರ್ವೆ ವಿಳಂಬವಾಗುತ್ತಿರುವ ಬಗ್ಗೆ ಹಾಗೂ ನಕ್ಷೆ ನೀಡದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆಗಾಲದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆಯಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿ ಜೀವಹಾನಿಯಾಗುವ ಸಾಧ್ಯತೆಯಿರುವುದರಿಂದ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಲಾಯಿತು.
swabhimananews@gmail.com
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್.ಕೆ.ಸಿ, ಪೊಲೀಸ್ ನಿರೀಕ್ಷಕ ಜಯರಾಮ.ಡಿ.ಗೌಡ, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ,

swabhimananews@gmail.com
ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಮಂಜುನಾಥ ಶೇಪೂರ, ಬ್ರಹ್ಮಾವರ ಎಡಿಎಲ್ಆರ್ ತಿಪ್ಪರಾಯ ತೊರವಿ, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ ನಾಯ್ಕ, ಚಾಂತಾರು ಪಿಡಿಓ ಸತೀಶ ನಾಯ್ಕ್, ಬ್ರಹ್ಮಾವರ ತಾಲೂಕು ಪಂಚಾಯತ್ ಯೋಜನಾಧಿಕಾರಿ ಸಂದೇಶ್ ಶೆಟ್ಟಿ, ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜಶೇಖರ ವಂದಲಿ, ಕಂದಾಯ ನಿರೀಕ್ಷಕ ಲಕ್ಷಿನಾರಾಯಣ ಭಟ್, ಬ್ರಹ್ಮಾವರ ತೋಟಗಾರಿಕೆ ಅಧಿಕಾರಿ ಮಹಾಂತೇಶ ಕಾಂಬಳೆ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಯ ಹಿರಿಯ ಮೇಲ್ವಿಚಾರಕಿ ಭಾಗಿರಥಿ ಆಚಾರ್ಯ, ಮೆಸ್ಕಾಂ ಸಹಾಯಕ ಅಭಿಯಂತರ ಅಶೋಕ್ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಬಿ.ಬಿ, ಬ್ರಹ್ಮಾವರ ಪಶು ಸಂಗೋಪನೆ ಇಲಾಖೆಯ ಮುಖ್ಯ ವೈದ್ಯಾಧಿಕಾರಿ ಡಾ:ಪ್ರದೀಪ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

swabhimananews@gmail.com

Related posts

ಕಟಪಾಡಿ:ಕಾರ್ಮಿಕರಿಬ್ಬರ ನಡುವೆ ಗಲಾಟೆ ಓರ್ವನ ಕೊಲೆ.!

Swabhimana News Desk

ಹಾವಂಜೆ ಗ್ರಾಮ ಪಂಚಾಯತ್ ಹಾಗೂ ಗ್ರಂಥಾಲಯ ಹಾಗೂ ಅರಿವು ಕೇಂದ್ರದ ವತಿಯಿಂದ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ.

Swabhimana News Desk

ಪ್ರೀಯಕರನ ಜೊತೆ ಸೇರಿ ಗಂಡನನ್ನು ಕೊಂದೇ ಬಿಟ್ಟ ರೀಲ್ಸ್ ರಾಣಿ ಹೆಂಡತಿ ಪ್ರತಿಮಾ.

Swabhimana News Desk

Leave a Comment