13 September 2025
Coastal

ಮಣಿಪಾಲ: ವೇಶ್ಯಾವಾಟಿಕೆ ದಂಧೆ – ಇಬ್ಬರ ಬಂಧನ,ಐವರು ಯುವತಿಯರ ರಕ್ಷಣೆ, ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ!

ಜುಲೈ -23-2023 swabhimananews@gmail.com

ಉಡುಪಿ: ವೇಶ್ಯಾವಾಟಿಕೆಗೆ ಸಂಬಂಧಿಸಿ ಮಪಾಲದ ವಿದ್ಯಾರತ್ನ ನಗರದಲ್ಲಿರುವ ಮನೆಯೊಂದಕ್ಕೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿ, ಐವರು ಯುವತಿಯರನ್ನು ರಕ್ಷಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಎಸ್ ಪಿ ಅಕ್ಷಯ ಹಾಕೆ ಮಚ್ಚೀಂದ್ರ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಪೊಲೀಸರು, ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಎಂಬವರನ್ನು ವಶಕ್ಕೆ ಪಡೆದು, ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ 5 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಇವರಲ್ಲಿ ಮೂವರ ಬೆಂಗಳೂರು ಮೂಲದ ನಿವಾಸಿಗಳಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ವೇಶ್ಯಾವಾಟಿಕೆ ವ್ಯವಹಾರಕ್ಕೆ ಬಳಸಿದ 4 ಮೊಬೈಲ್, 1 ಕಾರು, 2 ಬೈಕ್ ಹಾಗೂ 10,000ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅನೈತಿಕ ಚಟುವಡಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಪ್ರಮುಖ ಆರೋಪಿ ಖಾಲಿದ್ ಎಂಬಾತ ಸ್ಥಳದಿಂದ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
swabhimananews@gmail.com

Related posts

ಮೂವತ್ತಮೂರು ಎಕರೆ ಕೆರೆ ಈವಾಗ ಇರೋದು ಬರೀ ಇಪ್ಪತ್ತ ಮೂರು ಎಕರೆ.!

Swabhimana News Desk

ನಳಂದ ಬೌದ್ಧ ವಿಹಾರ ಟಿ ನರಸೀಪುರದ ಬಂತೆ ಪೂಜ್ಯ ಬೋದಿ ರತ್ನ ರವರ ನೇತೃತ್ವದಲ್ಲಿ ಗೃಹಪ್ರವೇಶ.

Swabhimana News Desk

ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ ಇದರ ವತಿಯಿಂದ ಭೋಧಿಸತ್ವ ದಲ್ಲಿ. ಅಂಬೇಡ್ಕರ್ ರವರ 133 ನೇ ಜಯಂತಿ ಆಚರಣೆ ಮತ್ತು ಭೀಮವಾದ ಮತ್ತು ಹಾವಂಜೆ ಗ್ರಾಮಪಂಚಾಯತ್ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ಸ್ವೀಕಾರ ನೆರವೇರಿತು.

Swabhimana News Desk

Leave a Comment