ಜುಲೈ -25-2023 swabhimananews@gmail.com
ಬೆಂಗಳೂರು: ಒಂದೂವರೆ ತಿಂಗಳಲ್ಲಿ ಮಳೆ ಕೊರತೆ ಉಂಟಾಗಿದ್ದ ರಾಜ್ಯದಲ್ಲಿ ಇದೀಗ ವರುಣಾರ್ಭಟ ಜೋರಾಗಿದೆ. ಸೋಮವಾರವೂ ಕರಾವಳಿ ಸೇರಿ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಡೆಕೋಲು 156 ಮಿ.ಮೀ., ಅರಂತೋಡು 142 ಮಿ.ಮೀ., ಅಜ್ಜಾವರ 130 ಮಿ.ಮೀ., ಬೆಳ್ಳಾರೆ 129.5 ಮಿ.ಮೀ., ಸಂಪಾಜೆ 123 ಮಿ.ಮೀ., ಮಡಪ್ಪಾಡಿ 117 ಮಿ.ಮೀ., ದೇವಚಳ್ಳ 116 ಮಿ.ಮೀ., ಪುತ್ತೂರು 114 ಮಿ.ಮೀ.,ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಉಳಿದಂತೆ ಕೊಡಗು ಜಿಲ್ಲೆಯ ಪೆರಾಜೆ 130 ಮಿ.ಮೀ., ಕುಣಿಜಾಳ 115 ಮಿ.ಮೀ., ಮಾಡೆ 113 ಮಿ.ಮೀ., ಚೆಂಬೂ 113 ಮಿ.ಮೀ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೋಡ್ಕ 110 ಮಿ.ಮೀ., ಕೆರವಾಡಿಯಲ್ಲಿ 110 ಮಿ.ಮೀ.ವರ್ಷಧಾರೆಯಾಗಿದೆ ಎಂದು ವರುಣಾಮಿತ್ರ ಮಾಹಿತಿ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಜು.25ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ. ಅಲ್ಲದೆ, ಜು.26, 27ರಂದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಇದ್ದರೆ, 28ರಿಂದ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅದೇರೀತಿ
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಜು.25ರಂದು ಬಿರುಸಾಗಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದ್ದು, ಜಿ.26ರಿಂದ ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಹಾಸನ, ಬೆಳಗಾವಿ, ಹಾವೇರಿ, ಕಲಬುರಗಿ, ವಿಜಯಪುರದಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಇರಲಿದೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮುಂದಿನ ಎರಡು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ.
swabhimananews@gmail.com